ಬೇಲೂರು ಪುರಸಭೆಯಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪುರಸಭೆ ಅಧ್ಯೆಕ್ಷೆ ಉಷಾ ಸತೀಶ್, ಭಾಗ್ಯಮ್ಮ, ತೀರ್ಥಕುಮಾರಿ ಇತರರು ಇದ್ದರು.
ಬೇಲೂರು: ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಆದರೂ ಮಹಿಳೆಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಇಂದಿಗೂ ನಿಂತಿಲ್ಲ. ಇದಕ್ಕೆ ಕಡಿವಾಣ ಹಾಕಬೇಕಿದೆ. ಜತೆಗೆ ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳು ಸಿಗಬೇಕಿದೆ ಎಂದು ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ತಿಳಿಸಿದರು.
ಪಟ್ಟಣದ ಪುರಸಭೆಯ ವೇಲಾಪುರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ಮಹಿಳೆಯರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದೇ ಸಮಾಜದ ಅಭಿವೃದ್ಧಿಗೆ ಮೂಲ. ಹೆಣ್ಣು ಕಲಿತರೆ ಇಡೀ ಕುಟುಂಬವನ್ನೇ ಬಲಪಡಿಸುತ್ತಾಳೆ ಎಂದು ತಿಳಿಸಿದರು.
ಪುರಸಭೆ ಸದಸ್ಯರಾದ ತೀರ್ಥಕುಮಾರಿ ವೆಂಕಟೇಶ್, ರತ್ನಕ್ಕ, ಬಿ.ಗಿರೀಶ್, ಮೀನಾಕ್ಷಿ, ಸೌಮ್ಯ, ಜಮೀಲಾ, ಫಯಾಜ್ ಅಹಮದ್, ಸೌಭಾಗ್ಯ, ಮುಖ್ಯಾಧಿಕಾರಿ ಬಸವರಾಜು ಸಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇತರರಿದ್ದರು.