ವೀರೇಂದ್ರ ಹೆಗ್ಗಡೆ ಜನ್ಮದಿನದ ಪ್ರಯುಕ್ತ ಆಯೋಜನೆ  
ಹಾಸನ

ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ

ವೀರೇಂದ್ರ ಹೆಗ್ಗಡೆ ಜನ್ಮದಿನದ ಪ್ರಯುಕ್ತ ಆಯೋಜನೆ

ಬೇಲೂರು: ಧರ್ಮಸ್ಥಳ ಶ್ರೀ ವೀರೇಂದ್ರ ಹೆಗ್ಗಡೆ ಅವರ 79ನೇ ಜನ್ಮದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಂಜುಳಾ ಮಾತನಾಡಿ, ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ರಾಜ್ಯದ ವಿವಿಧೆಡೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ, ರಕ್ತದಾನ ಶಿಬಿರ ಸೇರಿದಂತೆ ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕರವೇ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರಿಗೆ ಶ್ರೀ ಮಂಜುನಾಥಸ್ವಾಮಿ ಒಳಿತನ್ನು ಕರುಣಿಸಲಿ. ಸಮಾಜಮುಖಿ ಕಾರ್ಯಗಳನ್ನು ಇನ್ನಷ್ಟ್ಟು ಪರಿಣಾಮಕಾರಿಯಾಗಿ ಕೈಗೊಳ್ಳಲು ಅವರಿಗೆ ಶಕ್ತಿ ನೀಡಲಿ. ರಾಜ್ಯದಾದ್ಯಂತ ಸಂಘ-ಸಂಸ್ಥೆಗಳ ಮೂಲಕ ಜನರಿಗೆ ಹಲವು ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದರು.

ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸತೀಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಯಾನಂದ್, ಮದನ್, ಆರೋಗ್ಯಾಧಿಕಾರಿ ದಯಾನಂದ್ ಸೇರಿದಂತೆ ಇತರರಿದ್ದರು.

ಚಿತ್ರ:25(ಬಿಎಲ್‌ಆರ್)3-ಶ್ರೀ ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಂಣ್ಣುಗಳನ್ನು ವಿತರಿಸುತ್ತಿರುವುದು.