ಬೇಲೂರು: ತಾಲೂಕಿನ ಹುಲುಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟೇನಹಳ್ಳಿ ಗ್ರಾಮದಿಂದ ಹೀರಗುಪ್ಪೆವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಶನಿವಾರ ಭೂಮಿಪೂಜೆ ನೆರವೇರಿಸಿದರು.
ಸುಮಾರು 50 ಲಕ್ಷ ರೂ.ಅನುದಾನದಲ್ಲಿ ಎತ್ತಿನಹೊಳೆ ಯೋಜನೆಯಡಿ ಪುಟ್ಟೇನಹಳ್ಳಿಯಿಂದ ಹೀರಗುಪ್ಪೆ ಗ್ರಾಮದವರೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗ್ರಾಮದವರು ಕಾಮಗಾರಿಯ ಸದುಪಯೋಗ ಪಡೆದುಕೊಳ್ಳಬೇಕು. ನೂರಾರು ವರ್ಷಗಳ ಕಾಲ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಗುತ್ತಿಗೆದಾರರು ಕೆಲಸ ಮಾಡಬೇಕು. ಅಲ್ಲದೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸುರೇಶ್ ಹೇಳಿದರು.
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯಿಂದ ಸಾರ್ವಜನಿಕರು ಹಾಗೂ ರೈತರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಕಾಮಗಾರಿಯನ್ನು ಎತ್ತಿನಹೊಳೆ ನೀರಾವರಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದು, ಗುಣಮಟ್ಟದ ಕಾಮಗಾರಿ ಮಾಡಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ನಿಯಮಾನುಸಾರ ಕೈಗೊಳ್ಳಬೇಕು ಎಂದರು.
ಗ್ರಾಮಸ್ಥರಾದ ಭೀಮಭೋವಿ, ಗೋವಿಂದ ಭೋವಿ, ತಿಮ್ಮಭೋವಿ, ಸಣಭೋವಿ, ಧರ್ಮಭೋವಿ, ರಾಮಭೋವಿ, ಹನುಮಭೋವಿ, ಎತ್ತಿನಹೊಳೆ ಯೋಜನೆ ಅಧಿಕಾರಿಗಳಿದ್ದರು.
ಚಿತ್ರ:26(ಬಿಎಲ್‌ಆರ್)2-