ಬೇಲೂರು: ತಾಲೂಕಿನ ಕಿರೇಹಳ್ಳಿ ಗ್ರಾಮದ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಊಟದ ಹಾಲ್ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಬುಧವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, ಗ್ರಾಮದ ಶಕ್ತಿ ದೇವರಾದ ಶ್ರೀ ಕಲ್ಲೇಶ್ವರಸ್ವಾಮಿ ಸನ್ನಿಧಿಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ವಾರ ಹಾಗೂ ಹುಣ್ಣಿಮೆಯಂದು ನೂರಾರು ಭಕ್ತರು ಆಗಮಿಸುತ್ತಾರೆ. ಆದರೆ ಈ ಹಿಂದೆ ನಾನು ಇಲ್ಲಿಗೆ ಭೇಟಿ ನೀಡಿದಾಗ ಮಳೆಯಲ್ಲೇ ಭಕ್ತರು ಪ್ರಸಾದ ಸ್ವೀಕರಿಸುತ್ತಿದ್ದರು. ಇದನ್ನು ಮನಗಂಡು ಭಕ್ತರ ಅನುಕೂಲಕ್ಕಾಗಿ ಅಂದು ಗ್ರಾಮಸ್ಥರಿಗೆ ದೇಗುಲ ಆವರಣದಲ್ಲಿ ಶಾಶ್ವತವಾಗಿ ಊಟದ ಹಾಲ್ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದೆ, ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಕಾಮಗಾರಿಯನ್ನು ಗುಣಮಟ್ಟದಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮುಖಂಡ ಕರುಣಾ ಸಾಗರ್, ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಸ್ಥಳೀಯ ಇದ್ದರು.