ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪುರುಷರ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ತಂಡಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಂತರ ಕಾಲೇಜು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿವೆ.  
ಹಾಸನ

ಮಲೆನಾಡು ಇಂಜಿನಿಯರಿಂಗ್ ಕಾಲೇಜು ಪುರುಷರ ತಂಡ ಚಾಂಪಿಯನ್

ಅಂತರ ಕಾಲೇಜು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಹಾಸನ: ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪುರುಷರ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ತಂಡಗಳು ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಂತರ ಕಾಲೇಜು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಗಮನಾರ್ಹ ಸಾಧನೆ ಮಾಡಿವೆ.

ಪಂದ್ಯಾವಳಿಯಲ್ಲಿ ಕಾಲೇಜಿನ ಪುರುಷರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಮಹಿಳೆಯರ ತಂಡ ರನ್ನರ್-ಅಪ್ ಸ್ಥಾನ ಪಡೆದುಕೊಂಡಿದೆ. ಆರ್.ರಾಹುಲ್ ರಾಘವೇಂದ್ರ, ಆರ್.ವಿನಯ್, ಬಿ.ಕೆ.ಧ್ಯಾನ್ ನಾಯಕ, ಎಚ್.ಆರ್.ಆರ್ಯ ಹಾಗೂ ಎಂ.ಯದುನಂದನ್ ಪುರುಷರ ತಂಡದಲ್ಲಿದ್ದರು. ಸಿ.ಕೆ.ಸಹನಾ, ಎಚ್.ಅಹನಾ ಹಾಗೂ ಸನಿಹಾ ಎಸ್.ಗೌಡ ಮಹಿಳಾ ತಂಡವನ್ನು ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಆಡಳಿತ ಮಂಡಳಿ, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.