ಬೇಲೂರು: ತಾಲೂಕಿನ ಕಸಬಾ ಹೋಬಳಿಯ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಟಿಗೆರೆ ಗ್ರಾಮದಲ್ಲಿ 5 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್, ಗ್ರಾಮದ ಹಿರಿಯರ ಹಾಗೂ ಮುಖಂಡರ ಸಮ್ಮುಖದಲ್ಲಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಕಳೆದ ವರ್ಷ ಈ ಭಾಗದಲ್ಲಿ ಸುಮಾರು 25 ಲಕ್ಷ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಇದರ ಮುಂದುವರಿದ ಭಾಗವಾಗಿ, ಗ್ರಾಮದ ಮುಖಂಡರ ಮನವಿಯ ಮೇರೆಗೆ ದೇವಸ್ಥಾನದ ಸಮೀಪ ಹಾಗೂ ಗ್ರಾಮದ ಒಳಭಾಗದಲ್ಲಿ ರಸ್ತೆ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 5 ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಈ ಗ್ರಾಮಕ್ಕೆ ಪ್ರವಾಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ರಸ್ತೆಯಲ್ಲಿ ತಗ್ಗು-ದಿಣ್ಣೆಗಳಿಂದಾಗಿ ಸಂಚಾರಕ್ಕೆ ತೊಡಕಾಗಿತ್ತು. ಈ ಸಮಸ್ಯೆ ಬಗೆಹರಿಸುವಲ್ಲಿ ಸ್ಥಳೀಯ ಮುಖಂಡರಾದ ರಾಜಣ್ಣ, ಮೋಹನ್, ಆನಂದ್ ಸೇರಿದಂತೆ ಗ್ರಾಮಸ್ಥರ ಸಲಹೆಯಂತೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಗ್ರಾಮದ ಮುಖಂಡರಾದ ರಾಜಣ್ಣ, ಮೋಹನ್, ಆನಂದ್ ಸೇರಿದಂತೆ ಗ್ರಾಮಸ್ಥರಿದ್ದರು.