ಬೇಲೂರಿನ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಆರ್.ಕಲ್ಲೇಶ್ ಹಾಗೂ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಹೇಮಚಂದ್ರ, ರುದ್ರೇಶ್, ರಾಜಕುಮಾರ್, ಬಿ.ಧನಂಜಯಮೂರ್ತಿ, ಎಚ್.ಬಿ.ಮಲ್ಲೇಶಪ್ಪ, ರಾಜಶೇಖರ್ ಇತರರಿದ್ದರು. . 
ಹಾಸನ

ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ

ಎಚ್.ಆರ್.ಕಲ್ಲೇಶ್ ಅಧ್ಯಕ್ಷ, ಹೇಮಚಂದ್ರ ಗೌರವಾಧ್ಯಕ್ಷ, ರುದ್ರೇಶ್ ಪ್ರಧಾನ ಕಾರ್ಯದರ್ಶಿ

ಬೇಲೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಎಚ್.ಆರ್.ಕಲ್ಲೇಶ್ ಅವರು ಸರ್ವಾನುಮತದಿಂದ ಆಯ್ಕೆಯಾದರು.

ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಈ ಹಿಂದಿನ ಅಧ್ಯಕ್ಷ ಎಸ್.ಪಿ.ಪಾಲಾಕ್ಷ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕಾಗಿ ಪಟ್ಟಣದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೌಕರರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಎಚ್.ಆರ್.ಕಲ್ಲೇಶ್, ಗೌರವಾಧ್ಯಕ್ಷರಾಗಿ ಹೇಮಚಂದ್ರ, ಪ್ರಧಾನ ಕಾರ್ಯದರ್ಶಿ ರುದ್ರೇಶ್, ಖಜಾಂಚಿಯಾಗಿ ರಾಜಕುಮಾರ್, ಉಪಾಧ್ಯಕ್ಷರಾಗಿ ಬಿ.ಧನಂಜಯಮೂರ್ತಿ, ಎಚ್.ಬಿ.ಮಲ್ಲೇಶಪ್ಪ, ರಾಜಶೇಖರ್, ಸಹ ಕಾರ್ಯದರ್ಶಿಯಾಗಿ ಎಚ್.ವಿ.ಈಶ್ವರಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಶಿವಕುಮಾರ್ ಹಾಗೂ ಗಿರೀಶ್, ನಿರ್ದೇಶಕರಾಗಿ ಜಯಣ್ಣ, ಹುಲಿಯಪ್ಪ, ಬೈರವೇಶಪ್ಪ, ರಾಮರೆಡ್ಡಿ, ರುದ್ರೇಗೌಡ, ಜಿಲ್ಲಾ ಪ್ರತಿನಿಧಿಗಳಾಗಿ ಎಚ್.ಆರ್.ಪೂರ್ಣ, ರಘುಕುಮಾರ್, ಶಂಕರಪ್ಪ, ಗೌರವ ಸಲಹೆಗಾರರಾಗಿ ಮೋಕ್ಷ, ವಿಶ್ವೇಶ್ವರ, ರಮೇಶ್, ದಯಾನಂದ್, ಪಾಲಾಕ್ಷ, ಕುಮಾರ್, ಜಗದೀಶ್, ಶಾಂತೇಗೌಡ ಅವರನ್ನು ಆಯ್ಕೆ ಮಾಡಲಾಯಿತು.

ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕಟ್ಟಾಯ ಶಿವಕುಮಾರ್ ಮಾತನಾಡಿ, ನಮ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘವು ಜಿಲ್ಲಾದ್ಯಂತ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವೀರಶೈವ-ಲಿಂಗಾಯತ ನೌಕರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಂಘಟನೆ ಬಗ್ಗೆ ವಿಶ್ವಾಸ ಮೂಡಿಸುವುದು, ಸಮುದಾಯದ ನೌಕರರನ್ನು ಒಗ್ಗೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಸಂಘಟನೆಯನ್ನು ಬಲಪಡಿಸುವ ಕಾರ್ಯ ನಡೆಯುತ್ತಿದ್ದು, ಅದರ ಭಾಗವಾಗಿ ಬೇಲೂರು ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಅನುಭವಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಚ್.ಆರ್.ಕಲ್ಲೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ಪದಾಧಿಕಾರಿಗಳು ಸಂಘದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿ, ನೌಕರರ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದರು.

ನೂತನ ಅಧ್ಯಕ್ಷ ಎಚ್.ಆರ್.ಕಲ್ಲೇಶ್ ಮಾತನಾಡಿ, ಕಳೆದ 30 ವರ್ಷಗಳಿಂದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ. ಸಂಘದ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಸಂಘಟನೆಯ ಬಲವರ್ದನೆಗೆ ಆದ್ಯತೆ ನೀಡಲಾಗುವುದು. ಹಿರಿಯರ ಮಾರ್ಗದರ್ಶನ ಪಡೆದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು ಎಂದರು.