ನುಗ್ಗೇಹಳ್ಳಿ: ಅಲೆಮಾರಿ ಜನಾಂಗ ವಾಸಿಸುವ ಎಂ.ಸಿದ್ದಶೆಟ್ಟಿ ಗ್ರಾಮಕ್ಕೆ ಗ್ರಾಮಕ್ಕೆ ಸುಸಜ್ಜಿತ ಡಾಂಬರ್ ರಸ್ತೆ ನಿರ್ಮಿಸುವ ಜತೆಗೆ ಇನ್ನೆರಡು ತಿಂಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಹೇಮಾವತಿ ನದಿಯಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಹೋಬಳಿಯ ಎಂ.ಸಿದ್ದರಹಟ್ಟಿ ಗ್ರಾಮದಲ್ಲಿ ಬಾಗೂರು ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿ, ಗ್ರಾಮದ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಪ್ರಾಥಮಿಕ ಪಾಠಶಾಲೆ, ಶಿಶುವಿಹಾರ ಕಟ್ಟಡ, ಸಮುದಾಯ ಭವನ ನಿರ್ಮಾಣ, ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪನೆ, ಪಡಿತರ ಆಹಾರ ವಿತರಣೆ ಹಾಗೂ ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಂ.ಸಿದ್ದರಹಟ್ಟಿ ಗ್ರಾಮದ ಅಲೆಮಾರಿ ಜನಾಂಗದ 100 ಕುಟುಂಬಗಳಿಗೆ ಬಾಗೂರು ಲಯನ್ಸ್ ಕ್ಲಬ್ ವತಿಯಿಂದ ಉಚಿತವಾಗಿ ಆಹಾರ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು
ಬಾಗೂರು ಲಯನ್ಸ್ ಕ್ಲಬ್ ವತಿಯಿಂದ ವಿವಿಧ ರೀತಿಯ ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಿರುವುದು ಮಾದರಿಯಾಗಿದೆ ಎಂದರು.
ಲಯನ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಬಿ.ಎಚ್.ಶಿವಣ್ಣ, ಬಾಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಭುವನೇಂದ್ರ, ಖಜಾಂಚಿ ರೇವಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್.ಬಸವರಾಜು, ಕ್ಯಾಬಿನೆಟ್ ಮಾಜಿ ಕಾರ್ಯದರ್ಶಿ ಚಂದ್ರೇಗೌಡ, ಪ್ರಾಂತೀಯ ಅಧ್ಯಕ್ಷ ಎಚ್.ಕೆ.ನಾಗೇಶ್, ವಲಯ ಅಧ್ಯಕ್ಷ ಎಚ್.ರಮೇಶ್, ಹಾಸನ ಕ್ಲಬ್ ಅಧ್ಯಕ್ಷ ವೆಂಕಟೇಶ್, ಚನ್ನರಾಯಪಟ್ಟಣ ಕ್ಲಬ್ ಅಧ್ಯಕ್ಷ ಗೋವಿಂದರಾಜು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಣ್ಣೇಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಜಿ.ಜಯರಾಮ್, ಮುಖಂಡರಾದ ಎಸ್.ಆರ್.ಮಂಜುನಾಥ್, ಎಸ್.ಎಚ್.ನಾಗರಾಜ್, ಎಸ್.ಎಚ್.ಮಂಜುನಾಥ್, ಸಿದ್ದೇಶ, ಎಸ್.ಆರ್.ಶಿವು, ಎಸ್.ಎಲ್.ಯೋಗೇಶ್, ಲೋಕೇಶ್ ಸೇರಿದಂತೆ ಕ್ಲಬ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.