ಹಟ್ಟಿ ಚಿನ್ನದಗಣಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮೂಲಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಮಂಗಳವಾರವೂ ಮುಂದುವರಿಯಿತು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ ಮಾತನಾಡಿ, ಶಾಸಕ ಮಾನಪ್ಪ ವಜ್ಜಲ್ ಪ್ರತಿಭಟನಾ ಸ್ಥಳಕ್ಕೆ ಬಾರದೆ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಶಾಸಕರು ಬಂದು ಸಮಸ್ಯೆ ಆಲಿಸಿ ಪರಿಹರಿಸಬೇಕು. ಇಲ್ಲದಿದ್ದರೆ ಹಟ್ಟಿ ಬಂದ್‌ಗೆ ಕರೆ ನೀಡಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ವನಜಾಕ್ಷಿ, ಸಾಹಿರಾ ಬೇಗಂ, ಶಾಂತಾ ಕುಮಾರ್, ಬಿಪಾಷಾ, ಫಕೃದ್ದೀನ್, ಪೆಂಚಲಯ್ಯ ಇತರರಿದ್ದರು.