ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ರನ್ನರ್‌ಅಪ್ ಪ್ರಶಸ್ತಿ ಪಡೆದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತಂಡ.  
ಜಿಲ್ಲೆ

ಬಾಸ್ಕೆಟ್‌ಬಾಲ್‌ನಲ್ಲಿ ಹಟ್ಟಿಯಂಗಡಿ ಶಾಲೆ ರನ್ನರ್‌ಅಪ್

ಗಂಗೊಳ್ಳಿ: ಉಡುಪಿ ಶಾರದಾ ವಸತಿ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಅವಳಿ ರನ್ನರ್‌ಅಪ್ ಪ್ರಶಸ್ತಿ ಪಡೆಯಿತು.

14 ವರ್ಷದೊಳಗಿನ ಬಾಲಕ ಮತ್ತು 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ರನ್ನರ್‌ಅಪ್ ಪ್ರಶಸ್ತಿ ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯಿತು. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಕಾಶ್ ಬೆಸ್ಟ್ ಶೂಟರ್ ಹಾಗೂ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅಪೂರ್ವ ಶಿಂದೆ ಬೆಸ್ಟ್ ಡಿಫೆಂಡರ್ ಗೌರವ ಪಡೆದರು. ವಿದ್ಯಾರ್ಥಿಗಳ ಸಾಧನೆಗೆ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಶರಣ ಕುಮಾರ ಅಭಿನಂದನೆ ಸಲ್ಲಿಸಿದ್ದಾರೆ.