ಹಟ್ಟಿಯಲ್ಲಿ ಭಾನುವಾರ ಆಯೋಜಿಸಿದ್ದ ಬ್ರಾಹ್ಮಣ ಸಮುದಾಯದ ಜಾಗೃತಿ ಸಭೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಆನಂದ್ ಫಡ್ನವೀಸ್ ಮಾತನಾಡಿದರು.  
ಜಿಲ್ಲೆ

ಸಂಘಟಿತ ಹೋರಾಟಕ್ಕೆ ಸಜ್ಜಾಗಲು ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಆನಂದ್ ಫಡ್ನವೀಸ್ ಕರೆ

ಹಟ್ಟಿಚಿನ್ನದಗಣಿ: ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಹಾಗೂ ಸಮುದಾಯದ ಹಿತರಕ್ಷಣೆಗೆ ಬ್ರಾಹ್ಮಣರು ಹೋರಾಟಕ್ಕೆ ಮುಂದಾಗಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಆನಂದ್ ಫಡ್ನವೀಸ್ ಹೇಳಿದರು.

ಪಟ್ಟಣದ ನಂಜನಗೂಡು ರಾಘವೇಂದ್ರಸ್ವಾಮಿಗಳ ಶಾಖಾ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಸಮುದಾಯದ ಜಾಗೃತಿ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿರುವ ಸುಮಾರು 50 ಲಕ್ಷ ಬ್ರಾಹ್ಮಣರನ್ನು ಸಂಘಟಿಸಿ, ಸಮಾಜದ ಮುಖ್ಯವಾಹಿನಿಗೆ ತರಬೇಕಿದೆ. ಸಮುದಾಯದವರ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳ, ದೌರ್ಜನ್ಯ ತಡೆಗೆ ಸಂಘಟನೆ ಮಾಡುವುದು ಅನಿವಾರ್ಯವಾಗಿದೆ. ಜೂ.14ರಂದು ರಾಯಚೂರಿನಲ್ಲಿ ಸಮುದಾಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ತಿಳಿಸಿದರು. ರಾಜ್ಯ ಸಮಿತಿ ಸದಸ್ಯ ಅರವಿಂದ್ ಕುಲಕರ್ಣಿ ಮಾತನಾಡಿ ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಮಹಿಳೆಯರ ಹಾಗೂ ಯುವ ಘಟಕ ಸ್ಥಾಪಿಸಲು ಮಹಾಸಭಾ ಅವಕಾಶ ಕಲ್ಪಿಸಿದೆ ಎಂದರು.