ಕಾಗವಾಡ: ಉತ್ತಮ ಅಧ್ಯಯನ ಮಾಡುವ ಮೂಲಕ ಪಾಲಕರು, ಶಿಕ್ಷಕರು ಹಾಗೂ ಕಲಿತ ಶಾಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ತಾಲೂಕಿನ ಮೋಳೆ ಗ್ರಾಮದ ಶ್ರೀ ಸಿದ್ಧೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ನಿಮಿತ್ತ ಕೆಂಪವಾಡದ ಅಥಣಿ ಶುಗರ್ಸ್ ಕಾರ್ಖಾನೆಗೆ ಬುಧವಾರ ಭೇಟಿ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನಾನೂ ಅದೇ ಶಾಲೆಯಲ್ಲಿ ಕಲಿತು ಈ ಮಟ್ಟಕ್ಕೆ ಬೆಳೆಯಲು ಶಿಕ್ಷಕರ ಮಾರ್ಗದರ್ಶನ ಕಾರಣ ಎಂದರು.
ಅಥಣಿ ಶುಗರ್ಸ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಪ್ರಾಚಾರ್ಯ ಎಸ್.ಎಲ್.ಹವಳಿ ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳು ಇದ್ದರು.