ಜಿಲ್ಲೆ

ರೈತ ವಿದ್ಯಾನಿಧಿ ಸ್ಕಾಲರ್‌ಗೆ ಅವಕಾಶವಿಲ್ಲ

ಹಾವೇರಿ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಯೋಜನೆಗಳಡಿ 2023-24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುವುದಿಲ್ಲ.
2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪಾಲಕರ ಆದಾಯ 2.5 ಲಕ್ಷ ರೂ. ಮೀರಿರಬಾರದು ಎಂಬ ಷರತ್ತು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪಾಲಕರ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫೆ.29ರೊಳಗೆ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡುವಂತೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಪ್ರಕಟಣೆ ತಿಳಿಸಿದ್ದಾರೆ.