ಜಿಲ್ಲೆ

ಪ್ರೋತ್ಸಾಹಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿ.ಎಸ್ಸಿ ನರ್ಸಿಂಗ್ ಹಾಗೂ ಜಿ.ಎನ್.ಎಂ. ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯಕ್ಕೆ ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿಸಬೇಕು. ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದ ಒಳಗಿರಬೇಕು. ಅರ್ಹ ವಿದ್ಯಾರ್ಥಿಗಳು ನವೆಂಬರ್ 10ರೊಳಗಾಗಿ https://sevasindhu.karnataka.gov.in/sevasindhu/departmentServiesಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಅಥವಾ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಕಚೇರಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.