ಜಿಲ್ಲೆ

ಸಾರಥಿ ವಾಹನ ಸಹಾಯಧನಕ್ಕೆ ಆಯ್ಕೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಸ್ವಾವಲಂಬಿ ಸಾರಥಿ ವಾಹನ ಸಹಾಯಧನ ಯೋಜನೆಯ ಅಡಿಯಲ್ಲಿ ಜಿಲ್ಲೆಯಿಂದ ಪ್ರವಾಸಿ ಟ್ಯಾಕ್ಸಿ, ಸರಕುವಾಹನ ಯೋಜನೆಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಅಂಟಿಸಲಾಗಿದೆ.

ಒಟ್ಟು 1,327 ಅರ್ಜಿಗಳು ಹಾಗೂ ಪ್ಯಾಸೆಂಜರ್ ಆಟೋ ರಿಕ್ಷಾಕ್ಕೆ 104 ಅರ್ಜಿಗಳು ಸ್ವೀಕರಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅ.3ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಮತ ಕ್ಷೇತ್ರವಾರು ವಿಡಿಯೋ ಚಿತ್ರೀಕರಣದೊಂದಿಗೆ ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಆಯ್ಕೆ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡ್ ಮೇಲೆ ಲಗತ್ತಿಸಿದೆ. ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08375- 234114ಗೆ ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.