ಹಾವೇರಿ: ಹಾವೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 26 ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಜು.24ರ ಸಂಜೆ 5 ಗಂಟೆಯೊಳಗೆ ಲಿಖಿತ ರೂಪದಲ್ಲಿ ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನಿಗಧಿತ ಅವಧಿಯ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.