ಜಿಲ್ಲೆ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಫೆ.2ರ ಸಂಜೆ 5.30ರ ಒಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.