ಜಿಲ್ಲೆ

ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಿಇಟಿ, ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಎಚ್‌ಡಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ. ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ನಾಲ್ಕು ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅಭ್ಯರ್ಥಿಯು ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, 35 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂ. ಒಳಗಿರಬೇಕು. ಆಸಕ್ತರು ಡಿ.15ರೊಳಗಾಗಿ ಆನ್‌ಲೈನ್ kacdc.karnataka.gov.inಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 94484 51111 ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಾದೇವ ಮಳಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.