ಹಾವೇರಿ: ಪ್ರಸಕ್ತ 2025-26ನೇ ಸಾಲಿಗೆ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪ್ರಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೋಸೊಸ್, ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ಒಂದು ಸಾವಿರ ರೂ. ಪ್ರೋತ್ಸಾಹಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಿಕಲತೆ ದೃಢೀಕರಿಸುವ ವೈದ್ಯಕೀಯ ಪ್ರಮಾಣಪತ್ರ, ಯುಡಿಐಡಿ ಕಾರ್ಡ್, ಆರೈಕೆದಾರರ ಹಾಗೂ ವಿಕಲಚೇತನರ ಇತ್ತೀಚಿನ ಎರಡು ಜಂಟಿ ಭಾವಚಿತ್ರ, ಸಕ್ಷಮ ಪ್ರಾಧಿಕಾರದಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ, ಆರೈಕೆದಾರರ ಹಾಗೂ ವಿಕಲಚೇತನರ ಆಧಾರ್ ಕಾರ್ಡ್, ಆರೈಕೆದಾರರ ರಾಷ್ಟ್ರೀಕೃತ ಬ್ಯಾಂಕಿನ ಉಳಿತಾಯ ಖಾತೆ ಅಥವಾ ಅಂಚೆ ಕಚೇರಿಯ ಉಳಿತಾಯ ಖಾತೆ ವಿವರದೊಂದಿಗೆ ಅರ್ಜಿಯನ್ನು ಜುಲೈ 18ರೊಳಗಾಗಿ ಆಯಾ ತಾಲೂಕಿನ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.