ಜಿಲ್ಲೆ

ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ಬೆಳಗ್ಗೆ 6.30ಕ್ಕೆ

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜೂ.21ರಂದು ಬೆಳಗ್ಗೆ 6.30ಕ್ಕೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುವುದು.
ಬೆಳಗ್ಗೆ 7 ಗಂಟೆಯಿಂದ 7.45ರವರೆಗೆ ಸಾಮೂಹಿಕ ಯೋಗ ಕಾರ್ಯಕ್ರಮ ಜರುಗಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸದ್ಯರು, ಗಣ್ಯರು ಭಾಗವಹಿಸಲಿದ್ದಾರೆ.
ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಯೋಗಾಸಕ್ತರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಸಿ.ನಿಡಗುಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.