ಜಿಲ್ಲೆ

ಆಯುಷ್ಮಾನ್ ಭವ ಆರೋಗ್ಯ ಅಭಿಯಾನ 19ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಡಿ.19ರಂದು ಆಯುಷ್ಮಾನ್ ಭವ ಮೇಳ, ಆಯುಷ್ಮಾನ್ ಕಾರ್ಡ್ ನೋಂದಣಿ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಆಸ್ಪತ್ರೆಗಳಲ್ಲಿ ಸ್ವಚ್ಛ ಭಾರತ ಅಭಿಯಾನ, ರಕ್ತದಾನ ಅಭಿಯಾನ ಹಾಗೂ ಅಂಗಾಂಗ ದಾನ ಕುರಿತು ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಮಾಹಿತಿ ನೀಡಲಾಗುವುದು.
ಆಯುಷ್ಮಾನ್ ಭವ ಅಭಿಯಾನ ಕಾರ್ಯಕ್ರಮದಡಿ ಪ್ರತಿ ಮಂಗಳವಾರ ಜಿಲ್ಲೆಯ ಎಲ್ಲ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ, ಪ್ರಾ.ಆ. ಕೇಂದ್ರಗಳಲ್ಲಿ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣಾ ಮೇಳ ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.