ಜಿಲ್ಲೆ

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ 2022-23ನೇ ಸಾಲಿನ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ ಆರು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ ವಿವರಗಳನ್ನೊಳಗೊಂಡ ಮನವಿಗಳೊಂದಿಗೆ ಅರ್ಜಿಯನ್ನು ನವೆಂಬರ್ 18ರೊಳಗಾಗೊ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಸಲ್ಲಿಸಬೇಕು.
ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. ಅರ್ಜಿ ನಮೂನೆ, ಮಾನದಂಡಗಳನ್ನು ಕಚೇರಿ ವೆಬ್‌ಸೈಟ್‌ನಲ್ಲಿ ವಿಕ್ಷೀಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.