ಜಿಲ್ಲೆ

ಬಂಕಾಪುರದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ 17ರಂದು

ಹಾವೇರಿ: ಬಂಕಾಪುರ ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕೆಲಸ ನಿರ್ವಹಿಸುತ್ತಿರುವ ಹಾಗೂ 2013ರಲ್ಲಿ ಅಥವಾ ಅದರ ನಂತರದಲ್ಲಿ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ಸಮೀಕ್ಷೆ ನಡೆಸಲಾಗುತ್ತಿದೆ.

ಬಂಕಾಪುರ ಪುರಸಭೆ ಕಾರ್ಯಾಲದಯಲ್ಲಿ ಡಿ.17ರಂದು ಬೆಳಗ್ಗೆ 10.30ರಿಂದ ಸಂಜೆ 5.30ರವರೆಗೆ ಕ್ಯಾಂಪ್ ಆಯೋಜಿಸಲಾಗಿದೆ. ಇಂತಹ ಚಟುವಟಿಕೆಯಲ್ಲಿ ತೊಡಗಿದ್ದ ಹಾಗೂ ತೊಡಗಿರುವವರು ತಮ್ಮ ಅಗತ್ಯ ದಾಖಲೆಗಳಾದ ಪಾಸ್‌ಪೋರ್ಟ್ ಅಳತೆಯ ಒಂದು ಫೋಟೋ, ಬ್ಯಾಂಕ್ ಪಾಸ್‌ಬುಕ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಅಥವಾ ಯಾವುದಾದರೂ ಒಂದು ಗುರುತಿನ ಚೀಟಿ ಸಲ್ಲಿಸಬೇಕು. ಹೆಚ್ಚಿನ ಮಾಗಿತಿಗಾಗಿ ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣನವರ ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.