ಜಿಲ್ಲೆ

7ರಂದು ವಿದ್ಯುತ್ ವ್ಯತ್ಯಯ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಬಸವನಕಟ್ಟಿ 110ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಡಿ.7ರಂದು ಬಸವನಕಟ್ಟಿ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಸವನಕಟ್ಟಿ, ಸೋಮನಕಟ್ಟಿ, ಮಾಚಾಪುರ, ಬೂದಗಟ್ಟಿ, ಕನವಳ್ಳಿ, ಹನುಮನಹಳ್ಳಿ, ಕಾಟೇನಹಳ್ಳಿ, ಅಗಡಿ, ತಿಮ್ಮೇನಹಳ್ಳಿ, ಮಾಳಾಪುರ, ಗಾಂಧಿಪುರ, ಜಾನಕೊಪ್ಪ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.