ಜಿಲ್ಲೆ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ತಾಲೂಕಿನ 13 ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕಿನ ಅಗಡಿ, ಗುತ್ತಲ, ಹಾವೇರಿ, ಕನವಳ್ಳಿ, ಕಾಟೇನಹಳ್ಳಿ, ಮರೋಳ, ಯಲಗಚ್ಚ, ವರದಾಹಳ್ಳಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಜೂನ್ 16ರೊಳಗಾಗಿ ವೆಬ್‌ಸೈಟ್https://bcwd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹಾವೇರಿ ನಗರದ ಮೆಟ್ರಿಕ್ ನಂತರದ ಬಾಲಕಿಯರ ಮೂರು ಹಾಗೂ ಬಾಲಕರ ಒಂದು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ ಜೂನ 20ರೊಳಗಾಗಿ ವೆಬ್‌ಸೈಟ್https://bcwd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು.

ಪ್ರವರ್ಗ-2, ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 2.50 ಲಕ್ಷದೊಳಗೆ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರ ಆದಾಯ ಒಂದು ಲಕ್ಷದೊಳಗಿರಬೇಕು. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್https://bcwd.karnataka.gov.in ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಹಾವೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 80507 70004 ಸಂಪರ್ಕಿಸಬಹುದು ಎಂದು ಹಾವೇರಿ ತಾಲೂಕು ಹಿಂದುಳಿದ ವರ್ಗಗಳ ಕಲಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.