ಜಿಲ್ಲೆ

ನವೋದಯ ಶಾಲೆಗೆ ಭರಡಿ ಗ್ರಾಮದ ಚಂದನ ಆಯ್ಕೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಪ್ರಸಕ್ತ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿನ ಭರಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಚಂದನ ನಾಗಪ್ಪ ಡಬ್ಬಣ್ಣವರ ಆಯ್ಕೆಯಾಗಿದ್ದಾನೆ. ಈ ಮೂಲಕ ಶಾಲೆಯಿಂದ ಆಯ್ಕೆಯಾದ ಮೊದಲ ವಿದ್ಯಾರ್ಥಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾನೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್‌ಡಿಎಂಸಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.