ಜಿಲ್ಲೆ

ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರೂದ್ಯೋಗಿ ಯುವಕರಿಗೆ ಡಿ.30ರಿಂದ ಬೈಕ್ ರಿಪೇರಿ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಎಲ್ಲ ಕಂಪನಿಯ ದ್ವಿಚಕ್ರ ವಾಹನಗಳ ಸರ್ವಿಸ್, ವಾಟರ್ ವಾಶ್, ಏರ್ ಫಿಲ್ಟರ್ ಬದಲಾವಣೆ, ಆಯಿಲ್ ಬದಲಾವಣೆ, ಇಂಜಿನ್ ರಿಪೇರಿ, ಗೇರ್ ಮತ್ತು ಕ್ಲಚ್ ರಿಪೇರಿ, ಚೈನ್ ಸೆಟ್ಟಿಂಗ್, ಟೈರ್ ಸರ್ವಿಸ್, ಇಲೆಕ್ಟ್ರಿಕಲ್ ಸಿಸ್ಟಮ್, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಜಿಲ್ಲೆಯ ರೇಷನ್ ಕಾರ್ಡ್ ಹೊಂದಿದವರಿಗೆ ಮಾತ್ರ ತರಬೇತಿಗೆ ಅವಕಾಶವಿದೆ. ಉಚಿತ ಊಟ ಮತ್ತು ವಸತಿಯೊಂದಿಗೆ ತರಬೇತಿ ಉಚಿತವಾಗಿ ನೀಡಲಾಗುವುದು.
ಜಿಲ್ಲೆಯ 18ರಿಂದ 45 ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ರೇಷನ್ ಕಾರ್ಡ್, ಇ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇವರನ್ನು ಸಂಪರ್ಕಿಸಲು ಕೋರಲಾಗಿದೆ.