ಜಿಲ್ಲೆ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ಹಾವೇರಿ: ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಾಲೂಕಿನ ತಿಮ್ಮಾಪುರ ಬಳಿ ಗುರುವಾರ ಸಂಭವಿಸಿದೆ.
ರಾಣೆಬೆನ್ನೂರ ತಾಲೂಕಿನ ನೂಕಾಪುರ ತಾಂಡಾದ ಸಂತೋಷ ರಾಮಪ್ಪ ಕೇತಾವತ್ ಮೃತ ಬೈಕ್ ಸವಾರ.
ಈತ ಗುತ್ತಲದಿಂದ ನೂಕಾಪುರ ತಾಂಡಾಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.