ಹಾವೇರಿ: ಬಿಜೆಪಿ ಹಾವೇರಿ ನಗರ ಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಇಲ್ಲಿನ ಕಾಗಿನೆಲೆ ರಸ್ತೆಯ ಜಿಲ್ಲಾ ಕಾರ್ಯಾಲಯದಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣನವರ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು.
ಶಿಬಿರದಲ್ಲಿ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಅಭಿಷೇಕ ಗುಡಗೂರ, ನಗರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಕೋಡಿತ್ಕರ, ನಿಖಿಲ ಡೊಗ್ಗಳ್ಳಿ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಚಿನ್ನಿಕಟ್ಟಿ, ನಂಜುಂಡೇಶ ಕಳ್ಳೇರ, ಜಗದೀಶ ಕನವಳ್ಳಿ, ಜಗದೀಶ ಓಲೇಕಾರ, ಮಂಜುನಾಥ ಹುಲಗೂರ, ಪಕ್ಕಿರೇಶ ಹಾವನೂರ, ಶಿವಯೋಗಿ ಕೊಳ್ಳಿ, ನವೀನ ಪಾಟೀಲ, ವಿರೇಶ ಯಗಟಿ, ಜಗದೀಶ ಕೊಂಡೆಮ್ಮನವರ, ಭರತ ರಾಗಿರ, ಮಾರುತಿ ಮುದಿಯರಪ್ಪನವರ ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.