ಹಾವೇರಿ: ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣವರ ನಗರದಲ್ಲಿ ಬುಧವಾರ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ್ ಶೋ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಬಿಜೆಪಿ ಬಾವುಟ ಹಿಡಿದ ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ಚುನಾವಣಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಗ್ರಾಮೀಣ ಮಂಡಲ ಅಧ್ಯಕ್ಷ ಬಸವರಾಜ ಕಳಸೂರ ಸಾಥ್ ನೀಡಿದರು. ಮೆರವಣಿಗೆಯಲ್ಲಿ ಜಗದೀಶ ಬಸೆಗಣ್ಣಿ, ನಾಗೇಂದ್ರ ಕಡಕೋಳ, ಈರಣ್ಣ ಸಂಗೂರ, ನಂಜುಂಡೇಶ ಕಳ್ಳೇರ, ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ, ಕಿರಣ ಕೋಣನವರ, ಜಗದೀಶ ಮಲಗೋಡ, ಪ್ರಭು ಹಿಟ್ನಳ್ಳಿ, ರಮೇಶ ಪಾಲನ್ಕರ, ಬಸವರಾಜ ಮಾಸೂರ, ಸಂತೋಷ ಆಲದಕಟ್ಟಿ, ಮಂಜುಳಾ ಕರಬಸಮ್ಮನವರ, ಲತಾ ಬಡ್ನಮಠ, ಚನ್ನಮ್ಮ ಬ್ಯಾಡಗಿ, ಕರಬಸಪ್ಪ ಹಳದೂರ, ಪ್ರಕಾಶ ಉಜನಿಕೊಪ್ಪ, ಬಸವರಾಜ ಡೊಂಕಣ್ಣನವರ, ಮತ್ತಿತರರು ಪಾಲ್ಗೊಂಡಿದ್ದರು.