ಜಿಲ್ಲೆ

ಬಿಜೆಪಿಯಿಂದ ಹರ್ ಘರ್ ತಿರಂಗಾ ಯಾತ್ರೆ 10ರಿಂದ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಭಾರತೀಯ ಜನತಾ ಪಾರ್ಟಿ ವತಿಯಿಂದ ಆ.10ರಿಂದ 15ರವರೆಗೆ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಬೂತ್ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೂತ್ ಮಟ್ಟದಲ್ಲಿ ಸ್ವಾತಂತ್ರೊೃೀತ್ಸವ ಆಚರಿಸಲಾಗುವುದು. ಆ.14ರಂದು ಜಿಲ್ಲಾ ಕಾರ್ಯಾಲಯದಲ್ಲಿ ಕರಾಳ ದಿನ ಆಚರಿಸಲಾಗುವುದು ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ ಕೇಲಗಾರ ಮಾತನಾಡಿ, ಸ್ವಾತಂತ್ರೃ ದಿನವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ವಿಜೃಂಭಣೆಯಿಂದ ಆಚರಿಸಬೇಕು. ಪ್ರತಿ ಮಂಡಲಗಳಲ್ಲಿ ಸ್ವಾತಂತ್ರೃ ಹೋರಾಟಗಾರರ ಪ್ರತಿಮೆಗಳಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.

ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸಿಮಗೌಡರ, ಮಂಜುನಾಥ ಗಾಣಿಗೇರ ಮಾತನಾಡಿದರು.

ಸಭೆಯಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಎಸ್‌ಟಿ ಮೋರ್ಚಾ ರಾಜ್ಯ ಸದಸ್ಯ ಎನ್.ಎಂ.ಈಟೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ವೆಂಕಟೇಶ ನಾರಾಯಣಿ, ಜಿಲ್ಲೆ, ಮಂಡಲಗಳ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಪ್ರಕೋಷ್ಠಗಳ ಪದಾಧಿಕಾರಿಗಳು ಇದ್ದರು.