ಜಿಲ್ಲೆ

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆದೇಶದ ಮೇರೆಗೆ ಮೂವರು ಕಾರ್ಯಕರ್ತರನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಬ್ಯಾಡಗಿಯ ನಂಜುಂಡೇಶ ಕಳ್ಳೇರ, ಸವಣೂರಿನ ಮಂಜುನಾಥ ಗಾಣಗೇರ ಹಾಗೂ ಹಾವೇರಿಯ ಸಂತೋಷ ಆಲದಕಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕ ತಿಳಿಸಿದೆ.