ಹಾವೇರಿ: ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಗೆ ರಾಜ್ಯ ಸರ್ಕಾರದಿಂದ ಈ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಹಾವೇರಿ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು. ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಸುಭಾಷ ಚವ್ಹಾಣ, ಜಿಲ್ಲಾ ಓಬಿಸಿ ಅಧ್ಯಕ್ಷ ನೀಲಪ್ಪ ಚಾವಡಿ, ಗವಿಸಿದ್ದಪ್ಪ ದ್ಯಾಮಣ್ಣನವರ, ನಂಜುಂಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ವೆಂಕಟೇಶ ನಾರಾಯಣಿ, ಪ್ರಭು ಹಿಟ್ನಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಪುಷ್ಪಾ ಚಕ್ರಸಾಲಿ, ಲಲಿತಾ ಗುಂಡೇನಹಳ್ಳಿ, ಚನ್ನಮ್ಮ ಬ್ಯಾಡಗಿ, ಇತರರಿದ್ದರು.