ಜಿಲ್ಲೆ

ಮೋದಿ ಜನ್ಮದಿನ ಹಿನ್ನೆಲೆ ಅನ್ನಸಂತರ್ಪಣೆ; ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಸಂಭ್ರಮಿಸಿದ ಜಿಲ್ಲಾ ಬಿಜೆಪಿ ಕಾರ್ಯಕರ್ತರು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕಾರ್ಯಕರ್ತರು ಕೇಕ್ ಕತ್ತರಿಸಿ, ಸಿಹಿ ವಿತರಿಸುವ ಮೂಲಕ ಆಚರಿಸಿದರು. ಬಳಿಕ ಅನ್ನಸಂತರ್ಪಣೆ ಸೇವೆಯ ಮೂಲಕ ಮೋದಿ ಅವರಿಗೆ ಶುಭ ಕೋರಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಆಲದಕಟ್ಟಿ ಮಾತನಾಡಿ, ನರೇಂದ್ರ ಮೋದಿ ಅವರು ವಿಶ್ವ ಕಂಡ ಅಪ್ರತಿಮ ವ್ಯಕ್ತಿತ್ವದ ಮೇರು ನಾಯಕ. ಅವಿರತ ಕೆಲಸದ ಮೂಲಕ ದೇಶದ ಪ್ರಗತಿಯನ್ನು ಇಮ್ಮಡಿಗೊಳಿಸಿದ್ದಾರೆ. 10 ವರ್ಷಗಳ ಹಿಂದೆ ಭಾರತಕ್ಕೆ ಇದ್ದಂತಹ ಗೌರವ ಇಂದು ವಿಶ್ವಮಟ್ಟದಲ್ಲಿ ಸಾವಿರಪಟ್ಟು ಹೆಚ್ಚಾಗಿದೆ. ಅಷ್ಟೇ ಅಲ್ಲದೆ ಒಂದು ಕಾಲದಲ್ಲಿ ಭಾರತವನ್ನು ನಿಕೃಷ್ಟವಾಗಿ ಕಾಣುತ್ತಿದ್ದ ವಿಶ್ವದ ಅಗ್ರಗಣ್ಯ ರಾಷ್ಟ್ರಗಳು ಇಂದು ಭಾರತದ ಸ್ನೇಹಕ್ಕಾಗಿ ಹಾತೊರೆಯುತ್ತಿವೆ. ಅಲ್ಲದೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಾಲುಗಟ್ಟಿ ನಿಂತಿವೆ ಎಂದರು.
ಭಗವಂತ ನರೇಂದ್ರ ಮೋದಿ ಅವರಿಗೆ ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ ಕೊಟ್ಟು ದೇಶಕ್ಕೆ ಇನ್ನೂ ಹೆಚ್ಚಿನ ಸೇವೆ ಮಾಡಲು ಸಾಮರ್ಥ್ಯ ನೀಡಲಿ. ಅವರ ಜನ್ಮದಿನದಿಂದ ಪ್ರಾರಂಭವಾಗುವ ಸೇವಾ ಸಪ್ತಾಹ ಮಹಾತ್ಮ ಗಾಂಧೀಜಿಯವರ ಜನ್ಮದಿನದವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ಪಕ್ಷದ ವಿವಿಧ ಮೋರ್ಚಾಗಳಿಗೆ ವಿವಿಧ ಸೇವಾ ಕಾರ್ಯಗಳನ್ನು ಹಂಚಿಕೆ ಮಾಡಲಾಗಿದೆ. ಈ ವೇಳೆ ಎಲ್ಲ ಕಾರ್ಯಕರ್ತರು ಸೇವಾ ಚಟುವಟಿಕೆಯಲ್ಲಿ ಪಾಲ್ಗೊಂಡು ಸಪ್ತಾಹವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ, ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಭರಡಿ, ಪ್ರಕಾಶ ಉಜನಿಕೊಪ್ಪ, ಅಭಿಷೇಕ ಗುಡಗೂರ, ಲಲಿತಾ ಗುಂಡೇನಹಳ್ಳಿ, ವಿದ್ಯಾ ಶೆಟ್ಟಿ, ರಮೇಶ ಪಾಲನಕರ, ರುದ್ರೇಶ ಚಿನ್ನಣ್ಣನವರ, ಪ್ರಭು ಹಿಟ್ನಳ್ಳಿ, ಜಗದೀಶ ಕನವಳ್ಳಿ, ನೀಲಪ್ಪ ಚಾವಡಿ, ಮಂಜುನಾಥ ಹುಲಗೂರ, ರೋಹಿಣಿ ಪಾಟೀಲ, ಚನ್ನಮ್ಮ ಪಾಟೀಲ, ಲತಾ ಬಡ್ನಿಮಠ, ಪುಷ್ಪಲತಾ ಚಕ್ರಸಾಲಿ, ವಿಜಯಲಕ್ಷ್ಮಿ ಹೆಗಡೆ, ಭಾಗ್ಯಶ್ರೀ ಮೋರೆ, ವಿಜಯಕುಮಾರ ಚಿನ್ನಿಕಟ್ಟಿ, ಕಿರಣ ಕೋಣನವರ, ರವಿ ಅಂಗಡಿ, ಪಕ್ಕಿರೇಶ ಹಾವನೂರ, ನೀಖಿಲ ಡೊಗ್ಗಳ್ಳಿ, ಬಸವರಾಜ ಡೊಂಕಣ್ಣನವರ, ಇತರರು ಪಾಲ್ಗೊಂಡಿದ್ದರು.