ಜಿಲ್ಲೆ

ಮೈಸೂರಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಜು.12ರಂದು

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ, ನಡೆಯಲಿದ್ದು, ಇದರಲ್ಲಿ ಜಿಲ್ಲೆಯ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2004ರಲ್ಲಿ ಸಿದ್ದರಾಮಯ್ಯನವರ ಅಳಿಯ ಮಲ್ಲಿಕಾರ್ಜುನಸ್ವಾಮಿ ಅವರಿಂದ ದಾನದ ರೂಪದಲ್ಲಿ ತಂಗಿ ಹಾಗೂ ಸಿದ್ದರಾಮಯ್ಯನವರ ಪತ್ನಿಯವರಿಗೆ ಬಕ್ಷಿಸ್ ಮಾಡಿದರು. ಆದರೆ, ಮುಡಾ ಸ್ವಾಧೀನದಲ್ಲಿದ್ದ ಜಮೀನು ಹೇಗೆ ಖರೀದಿಸಲು ಸಾಧ್ಯವಾಯಿತು ಎಂಬುದು ನಮ್ಮ ಪ್ರಶ್ನೆ. 2009, 2010ರಲ್ಲಿ ಬಕ್ಷಿಸ್ ಆದ ಜಮೀನು ಆರ್.ಟಿ.ಸಿಯಲ್ಲಿ ಮುಡಾ ಹೆಸರು ನಮೂದಾಗಿದೆ. ಈ ವಿಚಾರವಾಗಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸುಳ್ಳು ಮಾಹಿತಿ ನೀಡಿದ್ದಾರೆ. 1991ರ ಕಾನೂನು ಪ್ರಕಾರ 1 ಎಕರೆಗೆ ಮೀರಿದ ಜಮೀನಿಗೆ ಒಂದೇ ನಿವೇಶನ ಕೊಡಬೇಕು. ಆದರೆ, 3 ಎಕರೆ 16 ಗುಂಟೆ ಜಮೀನಿಗೆ 2 ನಿವೇಶನ ಬದಲು 14 ನಿವೇಶನಗಳನ್ನು ನೀಡಿರುವುದು ಕಾನೂನು ಬಾಹಿರವಾಗಿದೆ. ಹಾಗಾಗಿ, ಈ ಭ್ರಷ್ಟಾಚಾರದ ಹೊಣೆ ಹೊತ್ತು ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಮೈಸೂರು ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ ತರಾತುರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಮುಡಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಡೆಂೆ ಮಹಾಮಾರಿ ಹೆಚ್ಚುತ್ತಿದ್ದು ಅದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರು ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ನಾಗರಾಜ ಹುಳ್ಳಿಕೊಪ್ಪಿ, ದೀಪಕ ಹರಪನಹಳ್ಳಿ ಇದ್ದರು.