ಜಿಲ್ಲೆ

ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಜೂ.28ರಂದು

ಹಾವೇರಿ: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಖಂಡಿಸಿ ಜೂ.28ರಂದು ಬೆಳಗ್ಗೆ 11.00 ಗಂಟೆಗೆ ಹಾವೇರಿಯ ಜಿಲ್ಲಾಧಿಕಾರಿಯವರ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸಲಾಗುವುದು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಹನುಮಂತಪ್ಪ ಮೀನಗಟ್ಟಿ ಹೇಳಿದರು.
ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಲಾಗುವುದು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಪಕ್ಷದ ರಾಜ್ಯ, ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಚಳಗೇರಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಓಬಿಸಿ ಮೋರ್ಚಾ ಅಧ್ಯಕ್ಷ ನೀಲಪ್ಪ ಚಾವಡಿ, ಜಿಲ್ಲಾ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಮಾಗಳ, ಬಿದ್ದಾಡೆಪ್ಪ ಮತ್ತೂರ, ನಿರಂಜನ ಹೇರೂರ, ಇತರರು ಉಪಸ್ಥಿತರಿದ್ದರು.