ಹಾವೇರಿ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ವಿಕಸಿತ ಭಾರತ ಜನಾಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಮೊ.ಸಂ. 9090902024 ಗೆ ಸಾರ್ವಜನಿಕರು ಮಿಸ್ಡ್ ಕಾಲ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಸಲಹೆ, ಸೂಚನೆ ನೀಡುವ ಅವಕಾಶವನ್ನು ಅಭಿಯಾನದ ಮೂಲಕ ಕಲ್ಪಿಸಲಾಗಿದೆ. ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಜಿಲ್ಲಾ ವಕ್ತಾರ ನಿರಂಜನ ಹೆರೂರ, ಕಿರಣ ಕೋಣನವರ, ಇತರರಿದ್ದರು.