ಹಾವೇರಿ: ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಜೂ.19ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ನಗರದ ಭಗತಸಿಂಗ್ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಜರುಗಲಿದೆ. ರಕ್ತದಾನದ ಕುರಿತು ಜಾಗೃತಿ ಜಾಥಾ 10.30ಕ್ಕೆ ಭಗತಸಿಂಗ್ ಮಹಾವಿದ್ಯಾಲಯದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಜರುಗಲಿದೆ. ಆಸಕ್ತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.