ಜಿಲ್ಲೆ

ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನಕ ಲೋಕ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಿವೃತ್ತ ತಹಶೀಲ್ದಾರ್ ಗವಿಸಿದ್ದಪ್ಪ ದ್ಯಾಮಣ್ಣನವರ, ಪ್ರಾಂಶುಪಾಲ ಗಣೇಶ ಎಂ, ಮಾರುತಿ ಬಾರ್ಕಿ, ಮೇರಿ.ಸಿ.ಎಲ್., ಇತರರಿದ್ದರು.