ಜಿಲ್ಲೆ

ಹಲವು ರೋಗಗಳಿಗೆ ಯೋಗವೇ ಔಷಧ; ಬಿಎಂಐಪಿ ಶಾಲೆಯ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಹೇಳಿಕೆ

ಹಾವೇರಿ: ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಸಾಮಾಜಿಕ, ವೈಯಕ್ತಿಕ ಹಿತಾಸಕ್ತಿಗಾಗಿ ಎಂಬ ಪರಿಕಲ್ಪನೆಯಲ್ಲಿ ಯೋಗ ದಿನಾಚರಣೆ ನಡೆಯುತ್ತಿದೆ. ಯೋಗ ಬಲ್ಲವನಿಗೆ ರೋಗವಿಲ್ಲ. ಪದೇಪದೆ ಕಾಡುವ ಹಲವು ರೋಗಗಳಿಗೆ ಯೋಗ ದಿವ್ಯ ಔಷಧವಾಗಿದೆ ಎಂದು ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಅಭಿಪ್ರಾಯಪಟ್ಟರು.
ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ ದೇವಗಿರಿ ಕ್ರಾಸ್ ಬಳಿಯ ಬಿಎಂ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಯೋಗವಿದ್ಯೆಯ ಮೂಲ ಭಾರತ. ಇದನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.
ಶಾಲೆಯ ಮಕ್ಕಳು, ಶಿಕ್ಷಕರು, ಸಿಬ್ಬಂದಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಶಾಲೆಯ ಪ್ರಾಚಾರ್ಯ ಎಂ.ಗಣೇಶ, ಶಿಕ್ಷಕರು, ಸಿಬ್ಬಂದಿ, ನೂರಾರು ಮಕ್ಕಳು ಹಾಜರಿದ್ದರು.