ಹಾವೇರಿ: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ನೂತನ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿಗೆ ಬಿಜೆಪಿ ಬಾವುಟ ನೀಡಿ, ಅಭಿನಂದಿಸಿದರು. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಸಿ ಪಾಟೀಲ, ಡಾ.ಬಸವರಾಜ ಕೇಲಗಾರ, ಇತರರಿದ್ದರು.