ಜಿಲ್ಲೆ

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆ.22ರಂದು

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಆರ್ಯ ಈಡಿಗರ ಸಂಘದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಆ.22ರಂದು ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಇತರ ಗಣ್ಯರು ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಕಾಂತೇಶ ಶಾಂತಪ್ಪ ಈಳಿಗೇರ ಹಾಗೂ ಉಪನ್ಯಾಸಕರಾಗಿ ಕಡೂರ ನಿವೃತ್ತ ಉಪನ್ಯಾಸಕ ಡಾ.ಎಂ.ಓಂ.ಮಮತೇಶ ಪಾಲ್ಗೊಳ್ಳಲಿದ್ದಾರೆ.