ಜಿಲ್ಲೆ

ಬಸ್ ಪಲ್ಟಿ; ಇಬ್ಬರು ದುರ್ಮರಣ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ‌ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕು ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಳಗಾವಿ ಮೂಲದ ಚಾಲಕ ಸದಾನಂದ (50) ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಮೀರಜ್ ಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು, ಸರ್ವಿಸ್ ರಸ್ತೆಗೆ ಉರುಳಿದೆ.

ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.