ಜಿಲ್ಲೆ

ಹಾನಗಲ್ಲ ನಗರದಲ್ಲಿ ಬಿಜೆಪಿ ಪ್ರತಿಭಟನೆ ಜುಲೈ 8ರಂದು; ಯುವತಿ, ಮಹಿಳೆಯರ ಮಾರಾಟ, ದೌರ್ಜನ್ಯ ಕೇಸ್ ಹೆಚ್ಚಳ ಹಿನ್ನೆಲೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಹೆಚ್ಚಾಗಿವೆ. ವಿಶೇಷವಾಗಿ ಹಾನಗಲ್ಲ ತಾಲೂಕಿನ ಬ್ಯಾಗವಾದಿ ಗ್ರಾಮದ ಮಕ್ಕಳ, ಮಹಿಳೆಯರ ಮಾರಾಟ ಕೇಸ್ ಸೇರಿದಂತೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ತಾಲೂಕಿನಲ್ಲಿ ಹೆಣ್ಣುಮಕ್ಕಳ ಕಳ್ಳ ಸಾಗಣಿಕೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಶಂಕೆಯಿದೆ. ಅಲ್ಲದೇ ಎಲ್ಲ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ, ಗಾಂಜಾ ಹಾಗೂ ಜೂಜು ಇತ್ಯಾದಿ ಚಟುವಟಿಕೆಗಳು ನಡಿಯುತ್ತಿವೆ. ಇತ್ತೀಚೆಗೆ ಸಾಮೂಹಿಕ ಅತ್ಯಾಚಾರದ ಆರೋಪಿಗಳು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದಾಗ ರಸ್ತೆಯಲ್ಲಿ ಮೆರವಣಿಗೆ ನಡೆಸಿದ್ದು, ಜಿಲ್ಲೆಯ ಮಹಿಳೆಯರ ಘನತಗೆ ದಕ್ಕೆ ತಂದಿದೆ. ಸ್ವಯಂಘೋಷಿತ ಆಪಪ್ಬಾಂಧವ ಶಾಸಕ ಶ್ರೀನಿವಾಸ ಮಾನೆ ಅಕ್ರಮ ಚಟುವಟಿಕೆ ಹಾಗೂ ಹಾಳಾಗಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಒಂದೇ ಒಂದು ಶಬ್ದವನ್ನು ಮಾತನಾಡದಿರುವದು ಸಂಶಯ ಮೂಡಿಸಿದೆ.

ಇದನ್ನು ಖಂಡಿಸಿ ಬೆಳಗ್ಗೆ 10 ಗಂಟೆಗೆ ಸಾವಿತ್ರಮ್ಮ ಉದಾಸಿ ಕಲ್ಯಾಣ ಮಂಟಪದಿಂದ ರ‌್ಯಾಲಿ ಆರಂಭಿಸಿ ಕನಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕ ಶಿವರಾಜ ಸಜ್ಜನರ, ಡಾ.ಶೋಭಾ ನಿಸ್ಸಿಮಗೌಡ್ರ, ಇತರರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.