ಜಿಲ್ಲೆ

ಅಗಡಿ ಗ್ರಾಮದಲ್ಲಿ ಅಧಿಕಾರಿಗಳಿಂದ ಜಾತಿ ಸಮೀಕ್ಷೆ ಪರಿಶೀಲನೆ

ಹಾವೇರಿ: ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಶುಕ್ರವಾರ ತಹಸೀಲ್ದಾರ ಶರಣಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಎಚ್. ಹುಲ್ಲಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಅಗಡಿ ಗ್ರಾಮದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಅವರು, ಗಣತಿ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿಗಳಿಂದ ಗಣತಿ ಮಾಹಿತಿ ಪಡೆದುಕೊಂಡರು. ನಿಖರವಾದ ಮಾಹಿತಿ ನೀಡುವಂತೆ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಸಲಹೆ ನೀಡಿದರು.