ಜಿಲ್ಲೆ

ಬಾಲ ಕಾರ್ಮಿಕರ ತಪಾಸಣೆ, ಜಾಗೃತಿ; ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ, ಪಾಲಕರಿಗೆ ನೋಟಿಸ್

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನವದೆಹಲಿ ಎನ್‌ಸಿಪಿಸಿಆರ್, ಪ್ಯಾನ್-ಭಾರತದ ಪಾರುಗಾಣಿಕಾ ಮತ್ತು ಮಕ್ಕಳ ಮತ್ತು ಹದಿಹರೆಯದವರ ಪುನರ್ವಸತಿ ಜಾಗೃತಿ ಅಭಿಯಾನ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ ಹಾಗೂ ಪುರ್ನವಸತಿ ಕುರಿತು ಶನಿವಾರ ಕಾರ್ಮಿಕ ಇಲಾಖೆ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಉದ್ಯಮ ಕೇಂದ್ರಗಳಿಗೆ ಭೇಟಿ ನೀಡಿ, ಬಾಲ ಕಾರ್ಮಿಕರ ತಪಾಸಣೆ ಕೈಗೊಳ್ಳಲಾಯಿತು.
ತಪಾಸಣೆ ಸಂದರ್ಭದಲ್ಲಿ ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪೋಷಕರ ವಶಕ್ಕೆ ಒಪ್ಪಿಸಲಾಯಿತು. ಪಾಲಕರಿಗೆ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರಾಗಲು ನೋಟಿಸ್ ನೀಡಲಾಯಿತು. ಬಾಲ ಕಾರ್ಮಿಕ ನಿಷೇಧ ಕಾಯ್ದೆಯ ಬಗ್ಗೆ ಮಾಲೀಕರಿಗೆ ಜಾಗೃತಿ ಮೂಡಿಸಲಾಯಿತು ಹಾಗೂ ಕಾರಣ ಕೇಳುವ ಸೂಚನಾ ಪತ್ರ ಜಾರಿ ಮಾಡಲಾಯಿತು.
ಕಾರ್ಮಿಕ ನಿರೀಕ್ಷಕರಾದ ಸಂಗೀತಾ ಬೆನಕನಕೊಪ್ಪ, ಪೊಲೀಸ್ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಮಕ್ಕಳ ಸಹಾಯವಾಣಿ 1098 ಸಿಬ್ಬಂದಿ ತಪಾಸಭೆಯಲ್ಲಿ ಪಾಲ್ಗೊಂಡಿದ್ದರು.