ಹಾವೇರಿ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಹಾವೇರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅ.1ರಂದು ಬೆಳಗ್ಗೆ 6.30ರಿಂದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹಾಗೂ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ನೇತೃತ್ವದಲ್ಲಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ನಡೆಯಲಿದೆ.
ನಗರದ ಎಲ್ಲ ವಾರ್ಡ್‌ಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ, ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.