ಕೇಂದ್ರದ ಪರಿಹಾರ ಬಂದ ನಂತರ ರೈತರಿಗೆ ಮತ್ತೆ ಪರಿಹಾರ; ಸಿಎಂ ಸಿದ್ದರಾಮಯ್ಯ
ಕೇಶವಮೂರ್ತಿ ಬೇಲೂರಪ್ಪನವರ
ಹಾವೇರಿ: ಪರಿಹಾರಕ್ಕಾಗಿ ರೈತರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರೈತರಿಗೆ 2,000 ರೂ. ತಾತ್ಕಾಲಿಕ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್. ನಿಯಮಾವಳಿಗಳ ಪ್ರಕಾರ ಮತ್ತೊಮ್ಮೆ ಪರಿಹಾರ ನೀಡಲಾಗುವುದು ಎಂದರು.