ಜಿಲ್ಲೆ

ಹಾವೇರಿ ನಗರಸಭೆ ಆಶ್ರಯ ಸಮಿತಿ ಅಧ್ಯಕ್ಷರಾಗಿ ಜಗದೀಶ ಬೇಟಗೇರಿ ನೇಮಕ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಇಲ್ಲಿನ ನಗರ ಸಭೆಯ ಆಶ್ರಯ ಸಮಿತಿ ಅಧ್ಯಕ್ಷರಾಗಿ ಜಗದೀಶ ದುಂಡಪ್ಪ ಬೇಟಗೇರಿ ಅವರನ್ನು ನೇಮಕ ಮಾಡಿ ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಜಗದೀಶ ಬೇಟಗೇರಿ ಅವರನ್ನು ಹಾವೇರಿ ನಗರಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡುವಂತೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ಇಲಾಖೆ ನೂತನ ಅಧ್ಯಕ್ಷರ ನೇಮಕ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.