ಜಿಲ್ಲೆ

ಹಾವೇರಿ ಅಶ್ವಿನಿನಗರ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಇಲ್ಲಿನ ಅಶ್ವಿನಿನಗರ ಎರಡನೇ ಕ್ರಾಸ್ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ ಪಕ್ಕದ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಭೂಮಿ ಪೂಜೆ ನೆರವೇರಿಸಿದರು.

ನಗರೋತ್ಥಾನ ಯೋಜನೆಯಡಿ 16 ಲಕ್ಷ ರೂ. ವೆಚ್ಚದಲ್ಲಿ ಎರಡೂ ಕಡೆ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸುಮಾರು 3 ದಶಕಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ, ಚರಂಡಿ ಕಾಮಗಾರಿಗೆ ಕೊನೆಗೂ ಮುಕ್ತಿ ದೊರೆಯಿತು.

ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಸದಸ್ಯೆ ಕವಿತಾ ಅಡಿವಯ್ಯ ಯಲವಗಿಮಠ, ಅಡಿವಯ್ಯ ಯಲವಗಿಮಠ, ಎಪಿಎಂಸಿ ಮಾಜಿ ಸದಸ್ಯ ರಾಮು ಮಾಳಗಿ, ಜಗದೀಶ ಕನವಳ್ಳಿ, ವಿಜಯಕುಮಾರ ಗೊಡಚಿ, ಇತರರಿದ್ದರು.